ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಪು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಗುಡ್ಡ ಕುಸಿದ ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.
ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ಮಧ್ಯಾಹ್ನದಿಂದಲೇ ಗುಡ್ಡ ಕುಸಿಯಲು ಆರಂಭಿಸಿತ್ತು. ನೋಡ ನೋಡುತ್ತಲೇ ಗುಡ್ಡದ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ.