ಉತ್ತರ ಪ್ರದೇಶ: ದಿಬ್ರುಗಢ ಎಕ್ಸ್ಪ್ರೆಸ್ನ 15 ಬೋಗಿಗಳು ಹಳಿ ತಪ್ಪಿ ನಾಲ್ವರು ಮೃತಪಟ್ಟು, 25 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಹಳಿ ತಪ್ಪಿದ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಕಾರ್ಯಾಚರಣೆಯನ್ನು ಗಮನಿಸುತ್ತಿವೆ.
ಕಳೆದ ತಿಂಗಳು ಜೂನ್ 17ರಂದೇ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ ಸೀಲ್ದಾಹ್ನಗೆ ಹೊರಟಿದ್ದ ಪ್ರಯಾಣಿಕ ರೈಲು ಕಾಂಚನಜುಂಗಾ ಎಕ್ಸ್ ಪ್ರೆಸ್ಗೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದರು.
ಈ ಘಟನೆ ನಡೆದು ಸರಿಯಾಗಿ ಒಂದು ತಿಂಗಳು ಕಳೆದಿದೆ ಅಷ್ಟೇ ಅಷ್ಟರಲ್ಲಿ ಈಗ ಉತ್ತರ ಪ್ರದೇಶ ಗೊಂಡಾದಲ್ಲಿ ಮತ್ತೊಂದು ರೈಲು ದುರಂತ ನಡೆದಿದೆ.