ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆ-ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ಜು.18 ರಿಂದ ಜು.22 ರ ತನಕ ಪ್ರತಿದಿನ ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆ ತನಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಸಂಪಾಜೆ-ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾಡಳಿತಕ್ಕೆ ನೀಡಿರುವ ವರದಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.



































 
 

ಕೊಡಗು ಜಿಲ್ಲೆಯ ಮೂಲಕ ಮೈಸೂರು, ಬೆಂಗಳೂರು ಮೊದಲಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ – ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top