ಫೆ.8 ರಿಂದ 10 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆ

ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ ಹಾಗೂ  ಬಾಲಾಲಯ ಪ್ರತಿಷ್ಠೆ ಫೆ.8 ರಿಂದ 10 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ.8 ಬುಧವಾರ ಸಂಜೆ ರಕ್ಷೋಘ್ನ ಹೋಮ, ವಾಸ್ತುಹೋಮ ನಡೆಯಲಿದೆ. ಫೆ.9 ಗುರುವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ, ಅನುಜ್ಞಾ ಕಲಶಪೂಜೆ, ತತ್ತ್ವ ಕಲಶ ಪೂಜೆ, ಮಧ್ಯಾಹ್ನ ಅನುಜ್ಞಾ ಕಲಶಾಭಿಷೇಕ, ತತ್ತ್ವ ಕಲಶಾಭಿಷೇಕ, ಧ್ಯಾನ ಸಂಕೋಚಕ್ರಿಯೆ ಜೀವಕಲಶ ಪೂಜೆ, , ಜೀವೋದ್ವಾಸನ, ಶಯ್ಯಾಪೂಜೆ, ರಾತ್ರಿ ಧ್ಯಾನಾಧಿವಾಸ ಕ್ರಿಯೆ, ಅಧಿವಾಸ ಹೋಮ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.



































ಫೆ.10 ಶುಕ್ರವಾರ ಬೆಳಿಗ್ಗೆ ಮಹಾಗಣಪತಿ ಹೋಮ ನಡೆದು ಬಳಿಕ 9.24 ರಿಂದ 10.30 ರ ತನಕ ನಡೆಯುವ ಮೀನ ಲಗ್ನ ಶುಭ ಮುಹೂರ್ತದಲ್ಲಿ ಬಾಲಾಲಯ ಪ್ರತಿಷ್ಠೆ, ಜೀವ ಕಲಶಾಭಿಷೇಕ ನಡೆಯಲಿದೆ.

 
 

ಬೆಳಿಗ್ಗೆ ನಡೆಯುವ ಸಭಾ ಕಾರ್ಯ‍ಕ್ರಮವನ್ನು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್‍ ಕುಮಾರ್‍ ಕಟೀಲ್‍ ಉದ್ಘಾಟಿಸುವರು. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಹಾಗೂ ಮೀನುಗಾರಿಕಾ ಸಚಿವ ಅಂಗಾರ ಎಸ್‍. , ವಿಧಾನ ಪರಿಷತ್‍ ಸದಸ್ಯರಾದ ಪ್ರತಾಪಸಿಂಹ ನಾಯಕ್‍, ಮಂಜುನಾಥ ಭಂಡಾರಿ, ಹರೀಶ್‍ ಕುಮಾರ್‍, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಆರ್ಯಾಪು ಗ್ರಾಪಂ ಅಧ್ಯಕ್ಷೆ ಸರಸ್ವತಿ ವಿಶ್ವನಾಥ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‍ ಮುಳಿಯ, ಜಿಲ್ಲಾ ಧಾರ್ಮಿಕ ಪರಿಷತ್‍ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಪಾಲ್ಗೊಳ್ಳಲಿದ್ದಾರೆ. ಬ್ರಹ್ಮಶ್ರೀ ಕೆಮ್ಮಿಂಜೆ ಕಾರ್ತಿಕ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top