ಮಂಗಳೂರು: ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇಂದು ಮಂಡನೆಯಾಗಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48 ಲಕ್ಷ ಕೋಟಿ ರೂ., ಮಹಿಳೆಯರ ಅಭಿವೃದ್ಧಿಗೆ 3 ಲಕ್ಷ ಕೋಟಿ ರೂ., ಕೃಷಿ ವಲಯಕ್ಕೆ 1.52 ಲಕ್ಷ ರೂ. ಮೀಸಲಿರಿಸುವ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮುದ್ರಾ ಯೋಜನೆಯ ಸಾಲದ ಮೀತಿ ಏರಿಕೆ ಸ್ವಾಗತಾರ್ಹ ಎಂದಿದ್ದಾರೆ.