ಮಂಗಳೂರು: ಮಂಗಳೂರು ಪೊಲೀಸರು ಜೈಲ್ ಮೇಲೆ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದೆ.
ಮುಂಜಾನೆ ನಾಲ್ಕು ಗಂಟೆ ವೇಳೆಗೆ ಪೊಲೀಸರು ದಾಳಿ ನಡೆಸಿದ್ದರು.
ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್ ಕೂಡಾ ವಶಪಡಿಸಿಕೊಂಡಿದ್ದಾರೆ. 150 ಕ್ಕೂ ಅಧಿಕ ಪೊಲೀಸರು ಜೈಲು ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ್ದು, ಡ್ರಗ್ಸ್ ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಆದೇಶಿಸಿದ್ದಾರೆ