ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಮುಂಡೂರು ಗ್ರಾಮ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಕಾರದೊಂದಿಗೆ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-15 ಕಾರ್ಯಕ್ರಮ ಜು.27 ಶನಿವಾರ ಮುಂಡೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30 ಕ್ಕೆ ನಡೆಯುವ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಮುಂಡೂರು ಸ. ಉ. ಹಿ. ಪ್ರಾ ಶಾಲೆ ವಿದ್ಯಾರ್ಥಿನಿ ಸಮ್ನ ವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಭಾಷಣವನ್ನು ಎಸ್. ಜಿ. ಎಂ ಅನುದಾನಿತ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಪೂಜಾ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದು, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಎನ್.ಎಸ್. ಡಿ. ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಂಡೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್, 21 ನೇ ಪುತ್ತೂರು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ ಶ್ರೀಧರ ಎಚ್. ಜಿ, ನರಿಮೊಗರು ಸಿ. ಆರ್. ಪಿ. ಪರಮೇಶ್ವರಿ ಪ್ರಸಾದ್ ಪಾಲ್ಗೊಳ್ಳುವರು.
ಸಮಾರಂಭದಲ್ಲಿ ಒಂಭತ್ತು ಮಂದಿ ವಿವಿಧ ಕ್ಷೇತ್ರದ ಸಾಧಕರನ್ನು ಮುಂಡೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಅಭಿನಂದಿಸಲಿದ್ದಾರೆ. ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಗೋಷ್ಠಿಗಳು ನಡೆಯಲಿವೆ.
ಬೆಳಿಗ್ಗೆ 9:00 ರಿಂದ ಸಂಜೆ 4ರ ತನಕ ನಡೆಯುವ ಈ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ನಡೆಯಲಿದೆ ಎಂದು ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.