ಮಂಗಳೂರು : ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ ಇಂದು ಬೆಳಿಗ್ಗೆ ಭೇಟಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಾಸ ಭಿ ವಿರಸಾತ್ ಭಿ’ ಎಂಬ ಪರಿಕಲ್ಪನೆಯ ಸಾಕಾರಮೂರ್ತಿಯಾಗಿರುವ ನಮ್ಮ ದಕ್ಷಿಣ ಕನ್ನಡದ ಅಪೂರ್ವ ಕಡಲತೀರ ಹಾಗೂ ಇತರ ನೈಸರ್ಗಿಕ ಮತ್ತು ಸಾಂಸ್ಕೃತಿಕ ಪರಂಪರೆಯ ತಾಣಗಳ ಬಗ್ಗೆ ಚರ್ಚೆ ನಡೆಸಿ, ಈ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗುವಂತೆ ಕ್ರಮ ತೆಗೆದುಕೊಳ್ಳುವಂತೆ ಸಚಿವರಲ್ಲಿ ಮನವಿ ಮೂಲಕ ವಿನಂತಿಸಿದರು.
ಈ ಸಂದರ್ಭದಲ್ಲಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದರು.