ಉಡುಪಿ : ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಶೀಘ್ರ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮೊರೆ ಹೋಗಿದ್ದಾರೆ.
ಇಂದು ಬೆಳಗ್ಗೆ ವಿಜಯಲಕ್ಷ್ಮಿ ಹಾಗೂ ಅವರ ಆಪ್ತರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪತಿ ಹೆಸರಿನಲ್ಲಿ ಚಂಡಿಕಾ ಯಾಗ ನಡೆಯುತ್ತಿದ್ದು ಪತ್ನಿ ವಿಜಯಲಕ್ಷ್ಮಿ ಭಾಗಿಯಾಗಿದ್ದಾರೆ.
ಜೋರಾಗಿ ಸುರಿಯುತ್ತಿರುವ ಮಳೆಯಲ್ಲೇ ದೇವಸ್ಥಾನಕ್ಕೆ ಐದು ಸುತ್ತು ಬಂದು ಪತಿಗಾಗಿ ಪ್ರಾರ್ಥಿಸಿದ್ದಾರೆ ವಿಜಯಲಕ್ಷ್ಮೀ.ಒಂದು ಕಾನೂನು ಹೋರಾಟ ಮಾಡುತ್ತಿದ್ದರೆ ಮತ್ತೊಂದು ಕಡೆ ನಿರಂತರವಾಗಿ ಪೂಜೆ ಪುನಸ್ಕಾರಗಳಲ್ಲಿ ವಿಜಯಲಕ್ಷ್ಮಿ ತೊಡಗಿಕೊಂಡಿದ್ದಾರೆ.