ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಚಾಕ್ರಿ ಕುಟುಂಬದ ಸದಸ್ಯರಾಗಿರುವ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ತ್ರಿಶೂಲ್ ಗೌಡ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ರಾಷ್ಟ್ರೀಯ ಇಂಟರ್ ಕ್ಲಬ್ ಓಪನ್ ಮೆನ್ ಅಥ್ಲೆಟಿಕ್ ವಿಭಾಗದ ಜೀವರಕ್ಷಕ ವಿಶ್ವ ಚಾಂಪಿಯನ್ ಗೆ ಭಾರತದ ಈಜು ತಂಡದ ಸದಸ್ಯರಾಗಿ ಆಯ್ಕೆಯಾಗಿದ್ದು, ಅವರನ್ನು ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಸ್ಕೂಲ್ ಬನ್ನೂರು ಪುತ್ತೂರು, ಎವಿಜಿ ಟ್ರಸ್ಟ್ ನ ಪದಾಧಿಕಾರಿಗಳು ಜಂಟಿಯಾಗಿ ಸನ್ಮಾನಿಸಿ ಧನ ಸಹಾಯ ನೀಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ನಮ್ಮ ದೇಶದ ಕೀರ್ತಿಯನ್ನು ಮತ್ತಷ್ಟು ಉತ್ತುಂಗಕ್ಕೆ ಏರಿಸಿ ಎಂದು ಹಾರೈಸಿ, ಆಶೀರ್ವದಿಸಿ ಬೀಳ್ಕೊಟ್ಟರು.
ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ, ಸಂಚಾಲಕರಾದ ಎ.ವಿ. ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಗೌಡ ಮಲುವೇಳು, ಕುರಿಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಧುನರಿಯೂರು, ಸಂಸ್ಥೆಯ ಶಿಕ್ಷಕವೃಂದ, ಬೋಧಕೇತವೃಂದ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.