ಕಾರ್ಕಳ : ಹೊಸದಾಗಿ ನಿರ್ಮಿಸಿರುವ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿರುವ ಘಟನೆ ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ನಡದಿದೆ.
ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ತಕ್ಷಣ ಕಾರ್ಕಳ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ದೌಡಾಯಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿರುತ್ತಾರೆ. ಈ ಮೂಲಕ ಕಾರ್ಯಾಚರಣೆಯಲ್ಲಿ ಹೆಚ್ಚಿನ ಪ್ರಮಾಣದ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.