ಪುತ್ತೂರು: ಕಾರೊಂದು ಪಲ್ಟಿಯಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಪೇಟೆಯಲ್ಲಿ ಇಂದು ನಡೆದಿದೆ.
ಕಾರು ಪಲ್ಟಿಯಾಗಿ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಬ್ಬಿಣದ ತಡೆ ಬೇಲಿಗೆ ಕ್ರೇಟಾ ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆಯ ಮುಖಕ್ಕೆ ಅಲ್ಪ ಗಾಯವಾಗಿರುವುದು ಬಿಟ್ಟರೆ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ರಸ್ತೆ ಬದಿಯ ತಡೆಬೇಲಿ ಮುರಿದು ಚೆಲ್ಲಾಪಿಲ್ಲಿಯಾಗಿದೆ.
ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.