ಪುತ್ತೂರು : ಕಡಬ ತಾಲೂಕಿನ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಮಂಗಳವಾರ ಹಾಗೂ ಬುಧವಾರ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಜಾತ್ರೋತ್ಸವದ ಅಂಗವಾಗಿ ಸೋಮವಾರ ಊರ ಭಕ್ತಾದಿಗಳಿಂದ ಸವಣೂರು ಪುರುಬೆಟ್ಟು ಜಿನಮಂದಿರದ ವಠಾರದಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಮಂಗಳವಾರ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪರಿವಾರ ದೇವರುಗಳ ಪ್ರತಿಷ್ಠಾ ದಿನದ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ, ಅನ್ನಸಂತರ್ಪಣೆ ಜರಗಿತು. ಸಂಜೆ 6 ಗಂಟೆಯಿಂದ ದೀಪಾರಾಧನೆ, ತಾಯಂಬಕ ಸೇವೆ, ರಂಗಪೂಜೆ, ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ಅನ್ನಸಂತರ್ಪಣೆ ನಡೆಯಿತು.
ಬುಧವಾರ ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ರಾಜಾಂಗಣ ಪ್ರಸಾದ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ರಾತ್ರಿ 8 ರಿಂದ ಶ್ರೀ ಉಳ್ಳಾಲ್ತಿ ದೈವಕ್ಕೆ ನೇಮೋತ್ಸವ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು.