ಕೇರಳ : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ.
ಇನ್ನೂ ನೂರಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಸೇರಿದಂತೆ 40ಕ್ಕೂ ಹೆಚ್ಚು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.
ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಭಾರತೀಯ ಸೇನೆಯು 190 ಅಡಿ ಉದ್ದದ ಸೇತುವೆಯನ್ನು ನಿರ್ಮಿಸಿದೆ. ಈ ಸೇತುವೆಯು ಇರುವಂಜಿಪ್ಪುಳ ನದಿಯ ಮೇಲೆ ಮುಂಡಕ್ಕೆ ಮತ್ತು ಚೂರಲ್ಮಲದ ನೆರೆ ಪೀಡಿತ ಪ್ರದೇಶಗಳನ್ನು ಸಂಪರ್ಕಿಸಲು ಸಹಾಯ ಮಾಡುತ್ತದೆ. ಮಂಗಳವಾರ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಎರಡು ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿತ್ತು.