ಮಂಗಳೂರು : ಭಾರೀ ಮಳೆಯಿಂದಾಗಿ ನೆರೆ ಹಾವಳಿ ಪ್ರದೇಶಗಳಿಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ದಿನೇಶ್ ಗುಂಡೂರಾವ್, ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವ ಬಗ್ಗೆ ಸ್ಥಳೀಯ ನಿವಾಸಿಗಳ ಜೊತೆ ಸಚಿವರ ಜೊತೆ ಚರ್ಚೆ ನಡೆಸಿದರು.
ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಈ ವೇಳೆ ಸಚಿವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ತೋಟ ಮತ್ತು ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.