ಪುತ್ತೂರು : ಫೆ.11 ರಂದು ನಡೆಯುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ , ಸಚಿವರುಗಳು ಆಗಮಿಸುವ ಹಿನ್ನಲೆಯಲ್ಲಿ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗುತ್ತಿದೆ.
ಈ ಕುರಿತು ಕಾರ್ಯಕ್ರಮ ಸಂಯೋಜಕರಿಂದ ಪುತ್ತೂರು ಕೆಎಸ್ಆರ್ಟಿಸಿ ವಿಭಾಗಕ್ಕೆ ಮನವಿ ಬಂದ ಹಿನ್ನಲೆಯಲ್ಲಿ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗುವುದು.
ಆದ್ದರಿಂದ ಪುತ್ತೂರು, ಸುಳ್ಯ, ಬೆಳ್ತಂಗಡಿ. ಬಂಟ್ವಾಳ. ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸಲಾಗುತ್ತಿರುವ ನಿಗಮದ ಸಾರಿಗೆಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಸಾರ್ವಜನಿಕ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಗಮನಿಸಿ ಸಹಕರಿಸಬೇಕೆಂದು ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.