ದರೋಡೆ ಪ್ರಕರಣ : ಆರೋಪಿಗಳ ಬಂಧನ

ಮಡಿಕೇರಿ : ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಹಾಗೂ  ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ಪಡೂರು ಗ್ರಾಮದ ಕೆ.ಗಣೇಶ(28), ವೀರಕಂಬ ಗ್ರಾಮದ ಕುಸುಮಕರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾ‌ರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ ಬಿ.ಮೋಹನ್ ಕುಮಾರ್(45) ಬಂಧಿತರು.

ಆರೋಪಿಗಳ ಬಳಿಯಿಂದ 3.2 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ್ದ 2 ಕಾರುಗಳು ಮತ್ತು 9 ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಶಾಮೀಲಾದ ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.





















































 
 

ಸೋಮವಾರಪೇಟೆಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಅನುಷಾ ಮಾರ್ಕೆಟಿಂಗ್ ಏಜೆನ್ಸಿ ಹೆಸರಿನ ಅಂಗಡಿಯ ಮಾಲಕ ಕಿಬ್ಬೆಟ್ಟ ನಿವಾಸಿ ನೇಮರಾಜ್.ಕೆ.ಎಂ ಅವರು ಜುಲೈ 29ರಂದು ರಾತ್ರಿ 8.45 ಗಂಟೆಗೆ ಪತ್ನಿಯೊಂದಿಗೆ ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ದರೋಡೆ ನಡೆದಿತ್ತು.

ಕಿಬ್ಬೆಟ್ಟ ರಸ್ತೆಯ ತಿರುವಿನಲ್ಲಿ ಅಪರಿಚಿತ ವ್ಯಕ್ತಿಗಳು ಕಾರು ಮತ್ತು ಬೈಕ್ ನಲ್ಲಿ ಬಂದು ಅಡ್ಡಗಟ್ಟಿ ಮುಖಕ್ಕೆ ಖಾರದ ಪುಡಿ ಎರಚಿ ನೇಮರಾಜ್ ಅವರ ಪತ್ನಿ ಮೇಲೆ ಹಲ್ಲೆ ಮಾಡಿದರು. ನಂತರ ರೂ.6.18 ಲಕ್ಷ ನಗದು ಹಾಗೂ 3 ಮೊಬೈಲ್ ಪೋನ್‌ಗಳಿದ್ದ ಬ್ಯಾಗ್‌ನ್ನು ಕಸಿದುಕೊಂಡು ಪರಾರಿಯಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top