ಬೆಂಗಳೂರು: ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದ್ದು, ಆ.9 ನಾಳೆ ವಿಚಾರಣೆ ನಡೆಯಲಿದೆ.
ಸ್ನೇಹಮಯಿ ಕೃಷ್ಣ ಎಂಬುವರು ನೀಡಿದ ದೂರಿನಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ, ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ.
ಅರ್ಜಿಯ ವಿಚಾರಣೆ 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಡೆಸಲಿದ್ದಾರೆ. ದಾಖಲೆಗಳ ಪರಿಶೀಲನೆ ನಡೆದಿದ್ದು, ನಾಳೆಗೆ ವಾದ ಮಂಡನೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.
























