ಪ್ಯಾರಿಸ್ : ಜು.26ರಿಂದ ಆರಂಭಗೊಂಡಿದ್ದ ವರ್ಣರಂಜಿತ ಪ್ಯಾರಿಸ್ ಒಲಿಂಪಿಕ್ಸ್ ಇಂದು ತೆರೆ ಕಾಣಲಿದೆ.
17 ದಿನಗಳ ಕಾಲ ನಡೆದ ಒಲಿಂಪಿಕ್ಸ್ ನಲ್ಲಿ ಎಲ್ಲಾ ದೇಶಗಳ ಆಯ್ದ ಸುಮಾರು 100 ಕ್ರೀಡಾಪಟುಗಳು ಭಾಗವಹಿಸಿದ್ದು, ಭಾರತ ಈವರೆಗೆ 6 ಪದಕಗಳನ್ನು ಮಾತ್ರ ಗೆದ್ದುಕೊಂಡಿದೆ. ಈ ಅರು ಪದಕಗಳಲ್ಲಿ ಮೂರು ಮೆಡಲ್ ಶೂಟಿಂಗ್ ಸ್ಪರ್ಧೆಯಲ್ಲಿ ಬಂದಿರುವುದು ವಿಶೇಷ. ಜೊತೆಗೆ ಜಾವೆಲಿನ್ ಥೋನಲ್ಲಿ ಬೆಳ್ಳಿ, ಹಾಕಿಯಲ್ಲಿ ಕಂಚು, ಕುಸ್ತಿ ಫ್ರೀಸ್ಟೈಲ್‌ನಲ್ಲಿ ಕಂಚು ಗೆದ್ದುಕೊಂಡಿದೆ.
ಸಮಾರೋಪ ಸಮಾರಂಭದಲ್ಲಿ ಎಲ್ಲ ದೇಶಗಳ ಆಯ್ದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ನೂರಕ್ಕೂ ಹೆಚ್ಚು ಪ್ರದರ್ಶಕರು, ಅಕ್ರೋಬ್ಯಾಟ್‌ಗಳು, ನೃತ್ಯಗಾರರು ಮತ್ತು ಸರ್ಕಸ್ ಕಲಾವಿದರ ಮನರಂಜನಾ ಕಾರ್ಯಕ್ರಮಗಳೊಂದಿಗೆ ಒಲಿಂಪಿಕ್ಸ್ ಭವ್ಯವಾಗಿ ಮುಕ್ತಾಯವಾಗಲಿದೆ. ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಸಮಾರೋಪ ಸಮಾರಂಭದಲ್ಲಿ ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್ ಶ್ರೀಜೇಶ್ ಹಾಗೂ ಶೂಟಿಂಗ್‌ನಲ್ಲಿ ಎರಡು ಕಂಚಿನ ಪದಕದ ಸಾಧನೆ ಮಾಡಿರುವ ಮನು ಭಾಕರ್ ಭಾರತದ ಪರ ಧ್ವಜಧಾರಿಗಳಾಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಭಾರತದ ಪರವಾಗಿ ಪಿ.ವಿ ಸಿಂಧು, ಶರತ್ ಕಮಲ್ ಧ್ವಜಧಾರಿಗಳಾಗಿ ಕಾಣಿಸಿಕೊಂಡಿದ್ದರು.