ಪುತ್ತೂರು: ವಿದ್ಯಾರ್ಥಿಗಳಿಗೆ ಐಒಟಿ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವುದಕ್ಕಾಗಿ ಅಕ್ಷಯ ಕಾಲೇಜಿನ ಬಿ.ಸಿ.ಎ. ವಿಭಾಗ, ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಪ್ರಥಮ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರವು ನಡೆಯಿತು.
ವ್ಯಾಪಕವಾದ ಡೇಟಾ ಯುಗದಲ್ಲಿ, ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ಜ್ಞಾನ ಅತ್ಯಮೂಲ್ಯವಾದ ಮತ್ತು ಅನಿವಾರ್ಯವಾದ ಒಂದು ಅಂಶವಾಗಿದೆ. ಈಗಿನ ಪೈಪೋಟಿಯ ಯುಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಅದನ್ನು ಅನುಸರಿಸುವ ಜ್ಞಾನ ಅತ್ಯವಶ್ಯವಾಗಿದೆ. ಐಒಟಿ ಮತ್ತು ಡಿಜಿಟಲ್ ತಂತ್ರಜ್ಞಾನಗಳು ಜಾಗತಿಕ ಮಟ್ಟದಲ್ಲಿ ಉದ್ಯಮ, ಶಿಕ್ಷಣ, ಆರೋಗ್ಯ ಮತ್ತು ಬಹುತೇಕ ಎಲ್ಲಾ ವಾಣಿಜ್ಯ ಕ್ಷೇತ್ರಗಳಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುತ್ತಿದ್ದು ಈ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಯಿತು.
ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ, ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಗಣಕ ವಿಭಾಗ ಉಪನ್ಯಾಸಕಿ ನಿಧಿಶ್ರೀ ಎಂ.ಪಿ. ಸ್ಮಾರ್ಟ್ ಡಿವೈಸುಗಳು, ಡಿಜಿಟಲ್ ತಂತ್ರಜ್ಞಾನಗಳ ಮಹತ್ವ ಮತ್ತು ಆವಿಷ್ಕಾರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಂತ್ರಜ್ಞಾನ ಕ್ಷೇತ್ರದಲ್ಲಿ ಉದಯೋನ್ಮುಖ ಆವಿಷ್ಕಾರಗಳ ಮಹತ್ವವನ್ನು ತಿಳಿಸಿ, ಐಒಟಿ ತಂತ್ರಜ್ಞಾನವು ನಮ್ಮ ದಿನನಿತ್ಯದ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಚರ್ಚೆ ಮಾಡಲಾಯಿತು.
ಕಾರ್ಯಕ್ರಮದ ಒಂದು ಭಾಗವಾಗಿ, “ಟೆಕ್ ಟೈಟನ್ಸ್: ಎಮರ್ಜಿಂಗ್ ಟೆಕ್ನಾಲಜಿಗಳ ಕುರಿತ ಕ್ವಿಜ್” ಅನ್ನು ಹಮ್ಮಿಕೊಳ್ಳಲಾಯಿತು ಹಾಗೂ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಾಗಾರದ ಕೊನೆಗೆ ಡಿಜಿಟಲ್ ಫೌಂಡೇಶನ್ ಮತ್ತು ಸೈಬರ್ ಸುರಕ್ಷತೆ, ಡೇಟಾ ಸಂಗ್ರಹಣೆ, ಮತ್ತು ಸಂಚಾರ ನಿರ್ವಹಣೆ ಕುರಿತಾದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಬಿ.ಸಿ.ಎ. ವಿಭಾಗದ ಉಪನ್ಯಾಸಕಿ ಸೌಜನ್ಯ ಎಚ್. ಸ್ವಾಗತಿಸಿದರು. ವಿಭಾಗದ ಉಪನ್ಯಾಸಕರು ಮತ್ತು ಬಿ.ಸಿ.ಎ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.