ವಿಟ್ಲ: ಕುದ್ಧುಪದವಿನಲ್ಲಿ ನಡೆದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸುವಂತೆ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮತ್ತು ವಿಟ್ಲ ಮುಡ್ನೂರು ಪಂಚಾಯಿತಿ ಅಧ್ಯಕ್ಷ ಪುನೀತ್ ಮಾಡತ್ತಾರ್ ವಿಟ್ಲ ಠಾಣೆಗೆ ಭೇಟಿ ನೀಡಿ ಆಗ್ರಹಿಸಿದರು.
ತಕ್ಷಣ ಬಂಧಿಸುವುದಾಗಿ ಠಾಣಾಧಿಕಾರಿಯವರು ಭರವಸೆ ನೀಡಿದ್ದಾರೆ.
ಠಾಣೆಗೆ ಭೇಟಿ ನೀಡಿದ ರವರಿಗೆ ತಿಳಿಸಿದ್ದಾರೆ. ಸಮಾಜದಲ್ಲಿ ಸಣ್ಣ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ಕ್ಷಮಿಸುವ ಮಾತೇ ಇಲ್ಲ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದ ರೀತಿಯಲ್ಲಿ ನಮ್ಮ ಪ್ರಯತ್ನವನ್ನು ಮಾಡುತ್ತೇವೆಂದು ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.