ಕೊಣಾಜೆ: ವಿದೇಶದಲ್ಲಿ ಕೆಲಸಕ್ಕಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕ ವಿದೇಶದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ನಡುಪದವಿನ ಉಮ್ಮರ್ ಅವರ ಪುತ್ರ ನೌಫಲ್(25) ಮೃತ ಯುವಕ.
ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವಿವಾಹಿತನಾಗಿರುವ ನೌಫಲ್ ಅವರ ಮೃತದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ನೌಫಲ್ ಅವರ ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ತಿಳಿಸಿದ್ದಾರೆ.