ಪುತ್ತೂರು : ಭಾರತದ ಇತಿಹಾಸವನ್ನು ತಿರುಚಿದ್ದು ಇನ್ಯಾರೋ ಅಲ್ಲ, ಭಾರತೀಯರೇ ಅನ್ನುವುದು ದುರಂತ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ನಿಜ ಇತಿಹಾಸವನ್ನು ದಾಖಲಿಸುವವರನ್ನು ಮೂಲೆಗುಂಪು ಮಾಡಿ ಮಿಥ್ಯ ಇತಿಹಾಸವನ್ನೇ ಸತ್ಯವೆಂದು ನಂಬಿಸಲಾಯಿತು. ಇದರ ಪರಿಣಾಮ ದೇಶಕ್ಕಾಗಿ ಹೋರಾಡಿದ ನೈಜ ರಾಷ್ಟ್ರಭಕ್ತರ ಪರಿಚಯ ಈಗಿನ ತಲೆಮಾರಿಗೆ ಇಲ್ಲದಾಗಿದೆ ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.
ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾದ 78ನೇ ಸ್ವಾತಂತ್ರ್ಯ ದಿನಾಚರಣೆರಣೆಯಲ್ಲಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಸಾಮಾಜಿಕ ಧುರೀಣ ಮೊಗೆರೋಡಿ ಬಾಲಕೃಷ್ಣ ರೈ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ ಉಪಸ್ಥಿತರಿದ್ದರು.
ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಪ್ರಸ್ತಾವನೆಗೈದು, ಸ್ವಾಗತಿಸಿದರು. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಿನ್ಸಿಪಾಲ್ ಮಾಲತಿ ಡಿ ವಂದಿಸಿದರು. ವಿದ್ಯಾರ್ಥಿನಿ ರಿಶಾಲಿ ಕಾರ್ಯಕ್ರಮ ನಿರ್ವಹಿಸಿದರು. ಸಭಾಕಾರ್ಯಕ್ರಮದ ಮೊದಲು ಪೂರ್ವದಲ್ಲಿ ನೆಲ್ಲಿಕಟ್ಟೆ ಅಂಬಿಕಾ ಕ್ಯಾಂಪಸ್‌ನಿಂದ ಹಾಗೂ ಬಪ್ಪಳಿಗೆ ಅಂಬಿಕಾ ಕ್ಯಾಂಪಸ್ ನಿಂದ ಕಿಲ್ಲೆ ಮೈದಾನದ ಬಳಿಯ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿಗೆ ವೈಭವದ ಮೆರವಣಿಗೆ ನಡೆಯಿತು.