ತುಮಕೂರು : 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕುಣಿಗಲ್ ನ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಧ್ವಜಾರೋಹಣದ ವೇಳೆ ಕೆಲ ಪುಂಡರು ಪ್ಯಾಲೆಸ್ತೀನ್ ದ್ವಜ ಹಾರಿಸಲು ಮುಂದಾದ ಘಟನೆ ಬೆಳಕಿಗೆ ಬಂದಿದೆ.
ಕುಣಿಗಲ್ ತಾಲೂಕು ವತಿಯಿಂದ ನಡೆಯುತ್ತಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಕೆಲ ಕಿಡಿಗೇಡಿಗಳು ವೇದಿಕೆಯ ಕೂಗಳತೆಯ ದೂರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ನಿಂತಿದ್ದರು. ಇದನ್ನ ಕಂಡ ಕೆಲ ಸ್ಥಳೀಯರು ಯುವಕರನ್ನು ಪ್ರಶ್ನಿಸಿದ್ದಾರೆ.. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭಜರಂಗದಳದ ಕಾರ್ಯಕರ್ತರು ಕಿಡಿಗೇಡಿಗಳನ್ನು ಅಲ್ಲಿಂದ ಕಳಿಸಲು ಯತ್ನಿಸಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ
ಸದ್ಯ ಸ್ವಾತಂತ್ರ್ಯೋತ್ಸವದಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ನಿಂತಿದ್ದ ಕಿಡಿಗೇಡಿಗಳ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.