ತರಕಾರಿ ಲಾರಿ-ಖಾಸಗಿ ಬಸ್ ಡಿಕ್ಕಿ | ಲಾರಿ ಚಾಲಕ ಮೃತ್ಯು, ಹಲವರಿಗೆ ಗಾಯ

ಉಪ್ಪಿನಂಗಡಿ: ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಅಫಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಪಟ್ಟಿರುವುದಾಗಿ ತಿಳಿದು ಬಂದಿದೆ.

ಖಾಸಗಿ ಬಸ್ ಹಾಗೂ ಕ್ಯಾಂಟರ್ ವಾಹನದ ನಡುವೆ ಈ ಢಿಕ್ಕಿ ಸಂಭವಿಸಿದೆ. ಖಾಸಗಿ ಬಸ್ಸು ಮಂಗಳೂರಿನಿಂದ ಬೆಂಗಳೂರಿಗೆ ಸಮಚರಿಸುತಿತ್ತು. ಕ್ಯಾಂಟರ್ ವಾಹನ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತಿತ್ತು . ಪೆರ್ನೆ ಬಳಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಇನ್ನು ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top