ಪುತ್ತೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರ ಠಾಣೆಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಾಜ್ಯಪಾಲರು ಒಪ್ಪಿಗೆ ನೀಡಿದ ಪ್ರಾಸಿಕ್ಯೂಷನ್ ಹಿಂತೆಗೆದುಕೊಳ್ಳಬೇಕು ಅಥವಾ ಇಲ್ಲಿಂದ ವಾಪಾಸು ಹೋಗಬೇಕು. ಇಲ್ಲದಿದ್ದರೆ ಬಾಂಗ್ಲಾ ದೇಶದ ಪ್ರಧಾನಿಗೆ ಆದ ಗತಿ ಬರಲಿದೆ ಎಂದು ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಎಲ್ಲಾ ಕಡೆಗಳಲ್ಲಿ ಹೋರಾಟ ನಡೆಯುತ್ತಿದೆ. ಪುತ್ತೂರಿನ ಯುವಮೋರ್ಚಾ ತೀವ್ರವಾಗಿ ಖಂಡಿಸುತ್ತಿದ್ದು, ಈ ಕುರಿತು ಐವನ್ ಡಿ’ಸೋಜಾ ಅವರ ವಿರುದ್ಧ ದೂರು ನೀಡುತ್ತಿದ್ದೇವೆ. ಅದನ್ನು ಸ್ವೀಕರಿಸಿ ಅವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಯುವಮೋರ್ಚಾ ಅಧ್ಯಕ್ಷ ಶಿಶಿರ್ ಪೆರ್ವೋಡಿ, ಪ್ರಧಾನ ಕಾರ್ಯದರ್ಶಿ ಆದೇಶ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ವಿರೂಪಾಕ್ಷ ಭಟ್, ಅನಿಲ್ ತೆಂಕಿಲ, ಉಮೇಶ್‍ಕೋಡಿಬೈಲು, ರಾಜೇಶ್‍ರೈ ಪರ್ಪುಂಜ, ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಹರಿಪ್ರಸಾದ್ ಯಾದವ್, ನಾಗೇಶ್‍ಪ್ರಭು, ನಿತೇಶ್‍ಶಾಂತಿವನ., ಜಯಶ್ರೀ ಶೆಟ್ಟಿ, ದಿವ್ಯಾ ಪುರುಷೋತ್ತಮ, ವಿಶ್ವನಾಥ ಕುಲಾಲ್, ಹರೀಶ್ ಬಿಜತ್ರೆ, ರತನ್ ರೈ ಕುಂಬ್ರ, ಶಿವಕುಮಾರ್ ಕಲ್ಲಿಮಾರ್ ಮತ್ತಿತರರು ಉಪಸ್ಥಿತರಿದ್ದರು.