ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಕಟ್ಟು ಕಥೆ ಹೆಣೆದು ಸಮಾಜದಲ್ಲಿ ಅಶಾಂತಿಗೆ ಕಾರಣಳಾದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ನಗರ ಪೊಲೀಸರಿಗೆ, ಕಾಲೇಜಿನ ಪ್ರಾಂಶುಪಾಲರಿಗೆ, ಗುರುವಾರ ಮನವಿ ಸಲ್ಲಿಸಿದ್ದಾರೆ.
ಚೂರಿ ಇರಿತ ಪ್ರಕರಣದಲ್ಲಿ ವಿದ್ಯಾರ್ಥಿನಿಯೊರ್ವಳ ಕಟ್ಟು ಕಥೆ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿತ್ತು. ವಿದ್ಯಾರ್ಥಿನಿಯ ಈ ಕಟ್ಟು ಕಥೆ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ. ಸುಳ್ಳು ದೂರು ನೀಡಿ ಯುವಕನ ಮಾನ ಹಾನಿಗೊಳಿಸಿ ಸಮಾಜದಲ್ಲಿ ಅಶಾಂತಿಗೆ ಕಾರಣಳಾಗಿದ್ದಾಳೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಒಂದು ವೇಳೆ ಮನವಿ ತಿರಸ್ಕರಿಸಿ ವಿದ್ಯಾರ್ಥಿನಿಯನ್ನು ವಜಾಗೊಳಿಸದೆ ಇದ್ದರೆ ತೀವ್ರವಾಗಿ ಹೊರಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಸುಳ್ಳು ಪ್ರಕರಣ ದಾಖಲಿಸಿದ ಸಂತ್ರಸ್ತ ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗುತ್ತಿದೆ ಅವರ ವಿರುದ್ಧವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.