ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ, ಸಹಕಾರ ಸಚಿವ ಅಮಿತ್ ಶಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದೆ.
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿದ್ದ ಅಮಿತ್ ಶಾ ಅವರು ಸಭಿಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಮುಂದಿನ ಬಾರಿಯೂ ಬಿಜೆಪಿ ಸರಕಾರವನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿಕೊಂಡರು.
ಕಾಂತಾರ ಚಲನಚಿತ್ರವನ್ನು ನೋಡಿ ಕರಾವಳಿಯ ಸೊಗಡನ್ನು ಅರಿತಿದ್ದೇನೆ ಎಂದು ಮಾತಿಗಾರಂಭಿಸಿದ ಶಾ, ಕದ್ರಿ ಶ್ರೀ ಮಂಜುನಾಥ್ ದೇವರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಣಾಮ ಸಲ್ಲಿಸಿದರು. ಕರಾವಳಿಯ ಸಂಪನ್ಮೂಲದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಶಾ, ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಸಮುದ್ರ ತೀರವನ್ನು ತಮ್ಮ ಮಾತಿನಲ್ಲಿ ಉಲ್ಲೇಖಿಸಿದರು. ಆಹಾರ ಕ್ರಮ, ವಿದ್ಯುತ್, ಮೂಲಭೂತ ಸೌಕರ್ಯಗಳ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಸಹಕಾರ ಸಚಿವ ಸೋಮಶೇಖರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹಾಗೂ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.