ಸೆ.1ರಿಂದ ರಾಜ್ಯದಲ್ಲಿ ಮದ್ಯ ಅಗ್ಗ?

ಮಾರಾಟ ಹೆಚ್ಚಿಸಲು ಬೆಲೆ ಇಳಿಕೆಗೆ ಮುಂದಾದ ಸರಕಾರ

ಬೆಂಗಳೂರು: ಗ್ಯಾರಂಟಿಗಳಿಗೆ ಸಂಪನ್ಮೂಲ ಸಂಗ್ರಹಿಸುವ ಸಲುವಾಗಿ ಮದ್ಯದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಿದ್ದ ಸರಕಾರ ಇದೀಗ ಬೆಲೆ ಇಳಿಸುವ ಕುರಿತು ಚಿಂತನೆ ನಡೆಸುತ್ತಿದೆ. ಬೆಲೆ ಏರಿಸಿದರೆ ಮದ್ಯ ಮಾರಾಟ ಮೂಲಕ ದೊಡ್ಡ ಮೊತ್ತದ ಸಂಪನ್ಮೂಲ ಸಂಗ್ರಹವಾಗಬಹುದು ಎಂಬ ಸರಕಾರದ ಲೆಕ್ಕಾಚಾರ ಉಲ್ಟಾ ಆಗಿದೆ. ಜನ ಇದ್ದುದರಲ್ಲೇ ಅಗ್ಗದ ಮದ್ಯ ಖರೀದಿಸುತ್ತಿದ್ದಾರೆ. ಗಡಿ ಭಾಗದ ಜನರು ಮದ್ಯ ಸೇವನೆಗಾಗಿ ಪಕ್ಕದ ರಾಜ್ಯಗಳಿಗೆ ಹೋಗುತ್ತಾರೆ. ಈ ಕಾರಣಕ್ಕೆ ಮದ್ಯ ಮಾರಾಟದಿಂದ ನಿರೀಕ್ಷಿತ ಆದಾಯ ಸಂಗ್ರಹವಾಗದಿರುವ ಹಿನ್ನೆಲೆಯಲ್ಲಿ ಸರಕಾರ ನೆರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ರಾಜ್ಯದಲ್ಲೂ ದುಬಾರಿ ಮದ್ಯವನ್ನು ಅಗ್ಗದ ದರದಲ್ಲಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಇದರಿಂದಾಗಿ ಶೀಘ್ರದಲ್ಲೇ ಮದ್ಯ ದರ ಇಳಿಕೆಯಾಗುವ ಸಾಧ್ಯತೆ ಇದೆ.

ನೆರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಮದ್ಯದ ದರ ಹೆಚ್ಚಿದೆ. ಹೀಗಾಗಿ ಗಡಿಭಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ಮೊತ್ತದ ಆದಾಯ ನಷ್ಟವಾಗುತ್ತಿದೆ. ಈ ನಷ್ಟವನ್ನು ತಪ್ಪಿಸಲು ಮದ್ಯ ದರ ಇಳಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.



































 
 

ಹೀಗಾಗಿ 16 ಸ್ಲ್ಯಾಬ್‌ಗಳ ದರ ಇಳಿಕೆಗೆ ಅಬಕಾರಿ ಇಲಾಖೆ ಮುಂದಾಗಿದ್ದು, ಸೆ.1ರಿಂದ ರಾಜ್ಯದಲ್ಲಿ ದುಬಾರಿ ಮದ್ಯ ಕಡಿಮೆ ಬೆಲೆಗೆ ಸಿಗಲಿದೆ. ದುಬಾರಿ ಬೆಲೆಯ ಬ್ರಾಂದಿ, ವಿಸ್ಕಿ ಜಿನ್, ರಮ್ ಈ ತಿಂಗಳಲ್ಲೇ ಅಗ್ಗವಾಗಲಿದೆ. ಪ್ರತಿ ಬ್ರ್ಯಾಂಡ್ ಮದ್ಯದ ಪರಿಷ್ಕೃತ ದರ ಪಟ್ಟಿ ಶುಕ್ರವಾರ ಅಥವಾ ಶನಿವಾರ ಬಿಡುಗಡೆಯಾಗುವ ಸಂಭವವಿದೆ.

ನೆರೆಹೊರೆಯ ರಾಜ್ಯಗಳ ಮದ್ಯ ಮಾರಾಟ ದರವನ್ನು ಪರಿಗಣಿಸಿ ಕರ್ನಾಟಕದಲ್ಲೂ ಮದ್ಯದ ದರ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದರು. ಬಳಿಕ ಜುಲೈನಿಂದ ದರ ಹೆಚ್ಚಳ ಆಗಬೇಕಿತ್ತು, ಆದರೆ ಸಿಎಂ ಸೂಚನೆಯ ಮೇರೆಗೆ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top