ಬೆಂಗಳೂರು: ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ತಜ್ಞರು ರಾಜ್ಯದ 25 ಸಾವಿರ ಬಡ ಪಿಯುಸಿ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಿದ್ದಾರೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತದೆ. ಆನ್ಲೈನ್ನಲ್ಲೂ ತರಬೇತಿ ನಡೆಯಲಿದೆ ಎಂದು ತಿಳಿಸಿದ್ದಾರೆ.
25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲಿದೆ. ತೇರ್ಗಡೆ ಆಗುವ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಅಲ್ಲದೆ, 8,9,10ನೇ ತರಗತಿ ವಿಜ್ಞಾನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ಮರು ಸಿಂಚನ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.