ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಮತ್ತು ಪೆರಿಯಡ್ಕ ಸರ್ವೋದಯ ಪ್ರೌಢಶಾಲೆ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆಯಿತು
ಶಾಲಾ ಪರಿವೀಕ್ಷಕ ಬಾಲಕೃಷ್ಣ ಬಿ.ಟಿ. ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಪಿ. ಅಧ್ಯಕ್ಷತೆ ವಹಿಸಿದ್ದರು.
ಉಪ್ಪಿನಂಗಡಿ ವಲಯದ ಜನಜಾಗೃತಿ ವೇದಿಕೆ ವಲಯಧ್ಯಕ್ಷ ಲೋಕೇಶ್ ಬೆತ್ತೋಡಿ ರವರು ಮಾತನಾಡಿ, ಸ್ವಾಸ್ತ್ಯ ಸಮಾಜ ನಿರ್ಮಾಣವಾಗಬೇಕಾದರೆ ಯುವ ಜನತೆಯ ಪಾತ್ರ ಬಹಳ ಮುಖ್ಯ. ಹದಿ ಹರೆಯದಲ್ಲಿ ದಾರಿ ತಪ್ಪುವ ವಿದ್ಯಾರ್ಥಿಗಳಿಗೆ ಈ ಬಗ್ಗೆ ಜಾಗೃತರಾಗಬೇಕು ಸಪ್ತ ವ್ಯಸನಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸಿ ವ್ಯಸನ ಮುಕ್ತ ಜೀವನ ನಡೆಸಿ ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಯೋಜನಾಧಿಕಾರಿ ಶಶಿಧರ್ ಎಂ. ಮಾತನಾಡಿ, ಯೋಜನೆ ಮುಖಾಂತರ ಹತ್ತಾರು ಕಾರ್ಯಕ್ರಮಗಳು ನಡೆಯುತ್ತಿದ್ದು ಸ್ವಾಸ್ತ್ಯ ಸಂಕಲ್ಪದ ಮೂಲಕ ಮಕ್ಕಳಲ್ಲಿ ಅರಿವನ್ನು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಮಾಜಿ ವಲಯ ಅಧ್ಯಕ್ಷ ಪ್ರಶಾಂತ್ ಪೆರಿಯಡ್ಕ ಒಕ್ಕೂಟದ ಅಧ್ಯಕ್ಷ ಶೇಖರ ಪಂಚೇರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ಬೊಳ್ಳವು,
ವಲಯದ ಮೇಲ್ವಿಚಾರಕ ಶಿವಪ್ಪ ಎಂ. ಕೆ., ಸೇವಾಪ್ರತಿನಿಧಿಗಳಾದ ಮಮತ, ಬೇಬಿ, ಶಶಿ, ಚಂದ್ರಿಕಾ ಉಪಸ್ಥಿತರಿದ್ದರು.