ಧರ್ಮಸ್ಥಳ : ಬೆಳಾಲು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಎಸ್.ಪಿ. ಬಾಲಕೃಷ್ಣ ಬಡೆಕ್ಕಿಲ್ಲಾಯ (83) ರವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರ ವಶವಾಗಿದ್ದಾರೆ.
ಬಂಧಿತರು ಬಾಲಕೃಷ್ಣ ಬಡೆಕ್ಕಿಲ್ಲಾಯ ರವರಿಗೆ ಸಂಬಂಧಿಕರಾಗಿದ್ದು, ಭೂಮಿ ವಿವಾದದಲ್ಲಿ ವೈ ಮನಸ್ಸು, ಉಂಟಾಗಿ ಕೊಲೆ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ ಎಂದು ಇಲಾಖೆ ತಿಳಿಸಿದೆ.
ಕೊಲೆ ಮಾಡಿದವರಲ್ಲಿ ಓರ್ವ ಅಪರಾಧ ಹಿನ್ನಲೆ ಹೊಂದಿದ್ದು, ಆತನ ವಿರುದ್ಧ ಕೇರಳ ರಾಜ್ಯದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
























