ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ ನಡೆಯಿತು.
ಸತೀಶ್ ಬೊಲಾರ್ ದೀಪ ಬೆಳಗಿಸಿ ಉದ್ಘಾಟಿಸಿ, ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಿ. ಎಲ್ಲಾ ವಿದ್ಯಾರ್ಥಿಗಳಿಗೂ ಒಂದಲ್ಲ ಒಂದು ರೀತಿಯ ಕೌಶಲ್ಯ ಇದ್ದೇ ಇರುತ್ತದೆ. ಅದನ್ನು ನಾವು ಸಮಯೋಚಿತವಾಗಿ ಪ್ರಸ್ತುತ ಪಡಿಸಬೇಕು. ನಾಯಕತ್ವ ಗುಣ ಮೈಗೂಡಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ಮೌಲ್ಯಾಧಾರಿತ ಶಿಕ್ಷಣ ಹಾಗೂ ಉತ್ತಮ ಉದ್ಯೋಗ ಸಿಗಬೇಕು ಎಂದು ಕಷ್ಟ ಪಟ್ಟು ವಿದ್ಯಾ ಸಂಸ್ಥೆಗಳಿಗೆ ಕಳುಹಿಸುತ್ತಾರೆ. ಅವರ ನಿರೀಕ್ಷೆಗೆ ಪೂರಕವಾಗಿ ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದರು.
ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಒಕ್ಕೂಟ ಕಾಲೇಜಿನ ಒಂದು ಅವಿಭಾಜ್ಯ ಅಂಗ. ವಿದ್ಯಾರ್ಥಿಗಳ ಕಲೆ, ಸಾಹಿತ್ಯ ಮತ್ತು ಕ್ರೀಡಾ ಅಭಿರುಚಿಗಳಿಗೆ ವೇದಿಕೆಯಾಗಿ, ವಿದ್ಯಾರ್ಥಿಗಳು ಪ್ರತಿನಿಧಿಗಳಾಗಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ನಡುಬೈಲ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ವಿದ್ಯಾರ್ಥಿ ಒಕ್ಕೂಟಕ್ಕೆ ಪ್ರಮಾಣವಚನ ಬೋಧಿಸಿದರು. ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ನೂತನ ಪದಾಧಿಕಾರಿಗಳಿಗೆ ಮಿನಿಟ್ಸ್, ಲೆಕ್ಕಪತ್ರ ಮತ್ತು ಫೈಲ್ ಗಳನ್ನು ಹಸ್ತಾಂತರಿಸಿದರು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಅಂತಿಮ ಪದವಿ ವಾಣಿಜ್ಯ ವಿಭಾಗದ ಜೀವನ್, ಅಂತಿಮ ಪದವಿ ಫ್ಯಾಷನ್ ಡಿಸೈನ್ ವಿಭಾಗದ ನವಮಿ ಉಪಾಧ್ಯಕ್ಷೆಯಾಗಿ, ಕಾರ್ಯದರ್ಶಿಯಾಗ ಅಂತಿಮ ಪದವಿ ಆಂತರಿಕ ವಿನ್ಯಾಸ ವಿಭಾಗದ ಪೂಜಿತ ಕೆ. ಎಂ. ಚುನಾಯಿಸಲ್ಪಟ್ಟರು.
ವಿದ್ಯಾರ್ಥಿ ಒಕ್ಕೂಟದ ಜೊತೆ ಕಾರ್ಯದರ್ಶಿಯಾಗಿ ದ್ವಿತೀಯ ಡಿಪ್ಲೋಮಾ ಫ್ಯಾಷನ್ ಡಿಸೈನ್ ವಿಭಾಗದ ವಿಜೇತ, ಖಜಾಂಚಿಯಾಗಿ ಅಂತಿಮ ಪದವಿ ಫ್ಯಾಷನ್ ಡಿಸೈನ್ ವಿಭಾಗದ ನರೇಂದ್ರ ಕೆ., ದ್ವಿತೀಯ ಪದವಿ ವಾಣಿಜ್ಯ ವಿಭಾಗದ ಟೀನಾ, ಕ್ರೀಡಾ ಕಾರ್ಯದರ್ಶಿಯಾಗಿ ಅಂತಿಮ ವಾಣಿಜ್ಯವಿಭಾಗದ ವಿಸ್ಮಿತ, ಜೊತೆಕಾರ್ಯದರ್ಶಿಗಳಾಗಿ ದ್ವಿತೀಯ ಬಿ. ಸಿ. ಎ ವಿಭಾಗದ ಸೃಜನ್ ಕೆ., ದ್ವಿತೀಯ ಆಂತರಿಕ ವಿನ್ಯಾಸ ವಿಭಾಗದ ಡಿoಪಲ್ ಕೆ.ಆರ್. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಂತಿಮ ಪದವಿ ಫ್ಯಾಷನ್ ಡಿಸೈನ್ ವಿಭಾಗದ ಮಧುರ ಆರ್. ವಿ., ಜೊತೆ ಕಾರ್ಯದರ್ಶಿಗಳಾಗಿ ದ್ವಿತೀಯ ಬಿ ಸಿ. ಎ ವಿಭಾಗದ ಕೀರ್ತನ್.ಕೃಷ್ಣ ಪಿ ಡಿ., ದ್ವಿತೀಯ ಪದವಿ ಫ್ಯಾಷನ್ ಡಿಸೈನ್ ವಿಭಾಗ ಧನ್ಯ ಶ್ರೀ, ಮಾಧ್ಯಮ ಕಾರ್ಯದರ್ಶಿಯಾಗಿ ಅಂತಿಮ ಪದವಿ ಫ್ಯಾಷನ್ ಡಿಸೈನ್ ವಿಭಾಗದ ಭಾರ್ಗವಿ .ಎಂ., ಜೊತೆ ಕಾರ್ಯದರ್ಶಿಗಳಾಗಿ ದ್ವಿತೀಯ ಪದವಿ ವಾಣಿಜ್ಯ ವಿಭಾಗದ ಉಜ್ವಲ.ಯು.ನಾಯ್ಕ್, ದ್ವಿತೀಯ ಪದವಿ ವಾಣಿಜ್ಯ ವಿಭಾಗದ ಅಂಕಿತ ಆಯ್ಕೆಗೊಂಡಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಕೀರ್ತನ್ ಆಯ್ಕೆಯಾಗಿದ್ದಾರೆ.
ಕಾಲೇಜಿನ ಉಪ ಪ್ರಾಂಶುಪಾಲ, ಆಂತರಿಕ ವಿನ್ಯಾಸ ವಿಭಾಗದ ಮುಖ್ಯಸ್ಥ ರಕ್ಷನ್ ಟಿ.ಆರ್. ಸ್ವಾಗತಿಸಿದರು. ಕಾಲೇಜ್ ಒಕ್ಕೂಟದ ಕಾರ್ಯದರ್ಶಿಯಾದ ಪೂಜಿತ ಕೆ. ವಂದಿಸಿದರು. ಬಿಎಚ್ ಎಸ್ ವಿಭಾಗದ ಉಪನ್ಯಾಸಕಿ ಶ್ರುತ ಕಾರ್ಯಕ್ರಮ ನಿರೂಪಿಸಿದರು.