ವಿದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವುದಾಗಿ ಮನೆಯವರನ್ನು ನಂಬಿಸಿದ ಯುವತಿ | ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು ಯತ್ನ

ಬೆಂಗಳೂರು: ಸುಳ್ಯದ ಯುವತಿಯೊಬ್ಬಳು ವಿದೇಶದಲ್ಲಿ ಉದ್ಯೋಗಕ್ಕೆಂದು ಹೋಗುವುದಾಗಿ ಮನೆಯವರಿಗೆ ತಿಳಿಸಿ ಅನ್ಯ ಕೋಮಿನ ಯುವಕನೊಂದಿಗೆ ಪರಾರಿಯಾಗಲು  ಯತ್ನಿಸಿದ ಘಟನೆ ನಡೆದಿದೆ.

ಪಿಯುಸಿ ಮುಗಿಸಿದ್ದ ಯುವತಿ ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವುದಾಗಿ ಹೇಳಿ ಪೋಷಕರನ್ನು ನಂಬಿಸಿ ಆ.25 ರಂದು ಮನೆ ಬಿಟ್ಟಿದ್ದಳು.

ಯುವತಿ ಪೋಷಕರು ತಮ್ಮ ಮಗಳು ವಿದೇಶಕ್ಕೆ ಹೋದಳೆಂದು ನಂಬಿದ್ದರೆ, ಸವಣೂರು ಮೂಲದ ಮುಸ್ಲಿಂ ಯುವಕನ ಜೊತೆ ಸೇರಿದ ಯುವತಿ ಬಳಿಕ ವಿಮಾನ ನಿಲ್ದಾಣದಿಂದ ಹೊರಬಂದು ವಾಪಾಸ್ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದಳು. ಈ ವೇಳೆ ಬಸ್ ನ ನಿರ್ವಾಹಕ ಅನುಮಾನಗೊಂಡು ಯುವತಿಯ ಫೋಟೋ ತೆಗೆದು ಹಿಂದೂ ಸಂಘಟನೆಯ ಯುವಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರೆನ್ನಲಾಗಿದೆ.







































 
 

ಫೋಟೋದಲ್ಲಿರುವ ಯುವತಿ ಸುಳ್ಯ ತಾಲೂಕಿನವಳು ಎಂದು ತಿಳಿಯುತ್ತಿದ್ದಂತೆ ಆಕೆಯ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಪೋಷಕರಿಗೆ ತಮ್ಮ ಮಗಳು ವಿದೇಶಕ್ಕೆ ಹೋಗಿಲ್ಲವೆಂದು ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದು, ಯುವತಿಯ ಮೊಬೈಲ್ ಲೊಕೇಷನ್ ಆಧಾರದಲ್ಲಿ ಆಕೆ ಬೆಂಗಳೂರಿನ ಹೊರವಲಯದಲ್ಲಿ ಇರುವ ಬಗ್ಗೆ ತಿಳಿದುಬಂದಿತ್ತು.

ಬೆಂಗಳೂರಿಗೆ ತೆರಳಿದ ಯುವತಿ ಪೋಷಕರು ಉಪ್ಪಾರಪೇಟೆ ಪೋಲಿಸ್ ಠಾಣೆಯಲ್ಲಿ ಆ.28ರಂದು ದೂರು ನೀಡಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಪ್ಪಾರಪೇಟೆ ಪೋಲಿಸರು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಸುಬ್ರಹ್ಮಣ್ಯಕ್ಕೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top