ಸವಣೂರು: ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಹೊಸದಾಗಿ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ನಡೆಯಿತು.
ವಿದ್ಯಾರಶ್ಮಿ ಸಮೂ ಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಳೆಯ ಮತ್ತು ಹೊಸ ವಿದ್ಯಾರ್ಥಿಗಳ ನಡುವೆ ಸೌಹಾರ್ಧತೆಯನ್ನು ಏರ್ಪಡಿಸುವ ಕಾರ್ಯಕ್ರಮವಿದು. ವಿದ್ಯಾರ್ಥಿಗಳು ಆಡಳಿತ ಮಂಡಳಿ ಒದಗಿಸಿಕೊಟ್ಟ ಸೌಲಭ್ಯಗಳನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಪೋಷಕರಿಗೆ ಹಾಗೂ ಸಂಸ್ಥೆಗೆ ಒಳ್ಳೆಯದನ್ನು ತರುವ ಕೆಲಸ ಮಾಡುವಂತೆ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ, ಕಳೆದು ಹೋದ ಸಮಯ ಮತ್ತೆ ಹಿಂದಿರುಗಲಾರದು. ಹಾಗಾಗಿ ಪದವಿ ಶಿಕ್ಷಣವನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸುವಂತೆ ಸಲಹೆ ನೀಡಿದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಡಾ. ನಾರಾಯ ಣ ಮೂರ್ತಿ ಕೆ., ಉಪಪ್ರಾಂಶುಪಾಲ ಶೇಷಗಿರಿ ಎಂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗ ಹಿಸಿದ ಎಲ್ಲರನ್ನು ದ್ವಿತೀಯ ಬಿ.ಎ. ಯ ಕಲ್ಪನಾ ಸ್ವಾಗತಿಸಿದರು. ಅಭಿಜ್ಞಾ, ಶ್ರಾವ್ಯವಾಣಿ ಪ್ರಾರ್ಥಿಸಿದರು. ದ್ವಿತೀಯ ಬಿ.ಸಿ.ಎ ಯ ಪ್ರಸ್ತುತಿ ವಂದಿಸಿದರು. ದ್ವಿತೀಯ ಬಿ.ಕಾಂನ ಫಾತಿಮತ್ ಸಝಾನ ನಿರ್ವಹಿಸಿದರು.