ಪುತ್ತೂರು : ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ದೈವಗಳ ನೇಮೋತ್ಸವ ಫೆ.13 ಸೋಮವಾರ ಹಾಗೂ 14 ಮಂಗಳವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಬ್ರಹ್ಮಶ್ರೀ ಕೆಮ್ಮಿಂಜೆ ಉಚ್ಚಿಲತ್ತಾಯ ಶ್ರೀ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಫೆ.13 ಸೋಮವಾರ ಬೆಳಿಗ್ಗೆ 8.45 ಕ್ಕೆ ಗೊನೆಮುಹೂರ್ತ, 9.30 ರಿಂದ ಬಜತ್ತೂರು, ಕಾಂಚನ, ಪದಕ ದೈವಗಳಿಗೆ ತಂಬಿಲ, ಬಜತ್ತೂರು ಗುತ್ತಿನ ನಾಗತಂಬಿಲ, 10 ಕ್ಕೆ ತೋರಣ ಮುಹೂರ್ತ, ರಾತ್ರಿ 7.30 ಕ್ಕೆ ಚಕ್ರವರ್ತಿ ಕೊಡಮಣಿತ್ತಾಯ ಮತ್ತು ಗ್ರಾಮ ದೈವ ಶಿರಾಡಿ ದೈವಗಳ ಭಂಡಾರ ತರುವುದು, 8 ಕ್ಕೆ ಶ್ರೀ ದೇವರಿಗೆ ರಂಗಪೂಜೆ, ಪಂಜುರ್ಲಿ ಮತ್ತು ಗ್ರಾಮ ದೈವಗಳಿಗೆ ಕೊಡಿನಾಡಿನಲ್ಲಿ ತಂಬಿಲ, ಪ್ರಸಾದ ವಿತರಣೆ, 8.30 ಕ್ಕೆ ಶ್ರೀ ದೇವರ ಬಲಿ ಹೊರಡುವುದು, ಪಂಚವಾದ್ಯ ಸೇವೆ, ಅಶ್ವತ್ಥ ಕಟ್ಟೆಪೂಜೆ, ಉತ್ಸವ, ವಸಂತ ಕಟ್ಟೆಪೂಜೆ, ನೃತ್ಯಬಲಿ ನಡೆಯಲಿದೆ.
ಫೆ.14 ಮಂಗಳವಾರ ಬೆಳಿಗ್ಗೆ 8 ಕ್ಕೆ ಗಣಪತಿ ಹೋಮ, ಕಲಶಾಭಿಷೇಕ, ಗಣಪತಿ ದೇವರಿಗೆ ಅಪ್ಪಸೇವೆ, 9 ರಿಂದ ಶ್ರೀ ದೇವರ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, 12 ಕ್ಕೆ ಕಲಶಾಭಿಷೇಕ, ಮಹಾಪೂಜೆ, ಪಂಜುರ್ಲಿ ದೈವಕ್ಕೆ ತಂಬಿಲ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5 ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 7 ಕ್ಕೆ ಶ್ರೀ ದೇವರಿಗೆ ರಂಗಪೂಜೆ, ವರ್ಣರ ಪಂಜುರ್ಲಿ ದೈವಕ್ಕೆ ತಂಬಿಲ ಮತ್ತು ಭಂಡಾರ ತೆಗೆಯುವುದು. 8 ರಿಂದ ಧಾರ್ಮಿಕ ಸಭೆ, ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10 ಕ್ಕೆ ವರ್ಣರ ಪಂಜುರ್ಲಿ, ಚಕ್ರವರ್ತಿ ಕೊಡಮಣಿತ್ತಾಯ, ಗ್ರಾಮ ದೈವ ಶಿರಾಡಿ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.