ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಕಳವಳಕಾರಿ : ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ವೈರುದ್ಧ್ಯದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕಳವಳ ವ್ಯಕ್ತಪಡಿಸಿದ್ದಾರೆ.
ಭಾರತ್ ಮಂಟಪದಲ್ಲಿ ನಡೆದ ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ನೆನಪಿಗಾಗಿ ನಿನ್ನೆ ಆಯೋಜಿಸಲಾದ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೋಲ್ಕತ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಹತ್ತಾರು ಪ್ರಕರಣಗಳು ಭಾರತ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂಬುದರ ಕುರಿತು ಕೂಲಂಕಷವಾಗಿ ಮರುಪರಿಶೀಲಿಸುವ ಅಗತ್ಯವನ್ನು ಹುಟ್ಟುಹಾಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆಡಳಿತ, ಮೂಲಸೌಕರ್ಯ, ಸೌಲಭ್ಯಗಳು, ತರಬೇತಿ ಮತ್ತು ಮಾನವ ಸಂಪನ್ಮೂಲಗಳ ಸುಧಾರಣೆ ಕಂಡುಬಂದಿದೆ ಎಂದು ನನಗೆ ಹೇಳಲಾಗುತ್ತಿದೆ. ಈ ಎಲ್ಲ ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಾಗಿದೆ. ಅಲ್ಲದೇ ಇತ್ತೀಚಿನ ವರ್ಷಗಳಲ್ಲಿ ಆಯ್ಕೆ ಸಮಿತಿಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿರುವುದನ್ನು ಗಮನಿಸಲು ನನಗೆ ಸಂತೋಷವಾಗಿದೆ ಎಂದು ಅವರು ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top