ಪಂಜ : ಶಾಲೆಯ ಪಠ್ಯ ಶಿಕ್ಷಣ ಜೊತೆಗೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಒಂದು ಉತ್ತಮ ಕಾರ್ಯಕ್ರಮ ಪ್ರತಿಭಾ ಕಾರಂಜಿ. ಎಂದು ಪಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಪಂಜ, ಸ.ಕಿ.ಪ್ರಾ. ಶಾಲೆ ಪಾಂಡಿಗದ್ದೆ ಇದರ ಸಂಯುಕ್ತ ಆಶ್ರಯದಲ್ಲಿ ಪಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಸೆ.2ರಂದು ಪಾಂಡಿಗದ್ದೆ ಸ.ಕಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಪಾಂಡಿಗದ್ದೆ ಎಸ್ ಡಿ ಎಂ ಸಿ ಅಧ್ಯಕ್ಷ ವಾಚಣ್ಣ ಕೆರೆಮೂಲೆ ಸಭಾಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ, ಶ್ರೀಮತಿ ಮಲ್ಲಿಕಾ, ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾ ಕುಮಾರಿ,ಸಿ ಆರ್ ಪಿ ಜಯಂತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪದಾಧಿಕಾರಿ ಶ್ರೀಮತಿ ಸರೋಜಿನಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ ಚಲ್ಲಕೋಡಿ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಶ್ರೀಮತಿ ಉಷಾ ಕಂಬಳ ಹಾಗೂ ಮುಖ್ಯ ಶಿಕ್ಷಕ ಯಶೋಧರ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.