ಹೊಸದಿಲ್ಲಿ: ಭಾರತೀಯ ಕೋಸ್ಟ್ಗಾರ್ಡ್ ಹೆಲಿಕಾಪ್ಟರೊಂದು ಗುಜರಾತ್ ಸಮುದ್ರದಲ್ಲಿ ತುರ್ತು ಲ್ಯಾಂಡಿಂಗ್ ಆಗಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ.
ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್ಗಾರ್ಡ್ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಹೆಲಿಕಾಪ್ಟರ್ನ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.