ಪುತ್ತೂರು: ದ.ಕ. ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಸಹಯೋಗದಲ್ಲಿ 2024-25ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಸಾಮೆತ್ತಡ್ಕ ಸುದಾನ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಿತು.
ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3181 ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಆಸ್ಕರ್ ಆನಂದ್ ಪಂದ್ಯಾಕೂಟಕ್ಕೆ ಚಾಲನೆಯನ್ನು ನೀಡಿ, ಕ್ರೀಡೆಯಿಂದ ಮನೋರಂಜನೆ, ದೈಹಿಕ ವ್ಯಾಯಾಮ ಸಿಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳಾಗಿ ವಿದ್ಯಾರ್ಥಿಗಳು ಹೊರಹೊಮ್ಮಬೇಕು ಎಂದರು.
ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಸೈಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪ್ರಥಮ, ವಿವೇಕಾನಂದ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಥಮ, ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ದ್ವಿತೀಯ ಸ್ಥಾನ ಪಡೆದುಕೊಂಡಿತು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಉಪನ್ಯಾಸಕ ಪ್ರದೀಪ್ ಕೆ ವೈ., ಉಪನ್ಯಾಸಕಿ ಚೈತ್ರಿಕ ನನ್ಯ ನಡೆಸಿಕೊಟ್ಟರು. ತಾಲೂಕು ಕ್ರೀಡಾ ಸಂಯೋಜಕ ಪುನೀತ್ ಕೆ ಉಪಸ್ಥಿತರಿದ್ದರು. ಉಪನ್ಯಾಸಕಿ ಆಶಾದೇವಿ ಟಿ., ಜ್ಯೋತಿ ವಿ. ಕಾರ್ಯಕ್ರಮ ನಿರೂಪಿಸಿದರು.