ಕೊಲೆ ಪ್ರಕರಣ : ದರ್ಶನ್‌ ವಿರುದ್ಧ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಪವಿತ್ರಾ ಎ1, ದರ್ಶನ್‌ ಎ2 ಆರೋಪಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಕೋರ್ಟ್‌ಗೆ ಪೊಲೀಸರು ಇಂದು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಳು. ಇದನ್ನು ಚಾರ್ಜ್‌ಶೀಟ್​ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ. ಇದರಿಂದ ಪವಿತ್ರಾ ಅವರು ಎ1 ಆರೋಪಿ ಆಗಿ ಮುಂದುವರಿದಿದ್ದಾಳೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್​ಎಸ್​ಎಲ್​ ಮಾತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಕೇಸ್‌ನ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತ ಇರುವುದು ಪತ್ತೆ ಆಗಿದೆ. ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಖಚಿತ ಮಾಹಿತಿ ಸಿಕ್ಕಂತೆ ಆಗಿದೆ.







































 
 

ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ, ಅವರು ಎ1 ಆಗಿದ್ದಾರೆ. ಹಲ್ಲೆ ನಡೆಯುವ ಸ್ಥಳದಲ್ಲಿ ಅವಳು ಹಾಜರಿದ್ದಳು. ಅವಳು ಚಪ್ಪಲಿಯಲ್ಲಿ ಅವರು ಹೊಡೆದಿದ್ದಾಳೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರ ಗೌಡ ಅಲ್ಲೇ ಇರುವುದಕ್ಕೆ ಸಾಕ್ಷಿ ಸಿಕ್ಕಿದೆ. ಪವಿತ್ರ ಗೌಡ ಮೊಬೈಲ್ ಕೃತ್ಯದ ಸ್ಥಳದಲ್ಲಿ ಆಕ್ಟೀವ್ ಆಗಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top