ಪಿಯುಸಿ ಪರೀಕ್ಷೆ ಅವಧಿ 15 ನಿಮಿಷ ಕಡಿತ

ಇನ್ನು 2.45 ತಾಸಲ್ಲಿ ಮಕ್ಕಳು ಉತ್ತರ ಬರೆದು ಮುಗಿಸಬೇಕು

ಬೆಂಗಳೂರು: ಶಾಲೆ ಮತ್ತು ಕಾಲೇಜನ್ನು ತನ್ನ ಪ್ರಯೋಗಶಾಲೆಯಾಗಿ ಮಾಡಿಕೊಂಡಿರುವ ಕಾಂಗ್ರೆಸ್‌ ಸರಕಾರ ಈಗ ಇನ್ನೊಂದು ಪ್ರಯೋಗಕ್ಕೆ ಮುಂದಾಗಿದೆ. ಈ ವರ್ಷದಿಂದಲೇ ದ್ವಿತೀಯ ಪಿಯುಸಿ ಮಕ್ಕಳ ಪರೀಕ್ಷೆ ಬರೆಯುವ ಅವಧಿಯನ್ನು ಕಡಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಹೊಸ ನಿಯಮವನ್ನು ಈ ವರ್ಷದಿಂದಲೇ ಅನುಷ್ಠಾನಗೊಳಿಸಲು ಮಂಡಳಿ ಸಜ್ಜಾಗಿದ್ದು, ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ ಕಡಿಮೆಯಾಗಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿದೆ. ಇದರಿಂದಾಗಿ, 3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಅವಧಿ 2 ಗಂಟೆ 45 ನಿಮಿಷಕ್ಕೆ ಇಳಿಕೆಯಾಗಲಿದೆ.
ಇದೇ ಶೈಕ್ಷಣಿಕ ವರ್ಷದಿಂದ ಹೊಸ ನಿಯಮ ಜಾರಿಗೊಳಿಸಲಾಗುವುದು ಎಂದು ಮಂಡಳಿ ಮಾಹಿತಿ ನೀಡಿದೆ. ಆದರೆ, ಪರೀಕ್ಷೆಯ ಅವಧಿ ಕಡಿತವಾದರೂ ವಿದ್ಯಾರ್ಥಿಗಳು ಪರೀಕ್ಷಾ ಹಾಲ್​​ನಲ್ಲಿ ಮೂರು ಗಂಟೆ ಇರಲೇಬೇಕಾಗುತ್ತದೆ. ಪರೀಕ್ಷೆಯ ಆರಂಭದ 15 ನಿಮಿಷವನ್ನು ಪ್ರಶ್ನೆಗಳನ್ನು ಓದಿಕೊಳ್ಳಲು ಬಳಸಲು ಅವಕಾಶ ನೀಡಲಾಗುತ್ತದೆ. ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ 100 ಅಂಕಕ್ಕೆ ಬದಲು 80 ಅಂಕಕ್ಕೆ ಪರೀಕ್ಷೆ ಬರೆಯುವಂತೆ ಮಾಡಲಾಗುತ್ತದೆ.
ಈ ಹಿಂದೆಯೂ 3 ಗಂಟೆ ಅವಧಿಯ ಪರೀಕ್ಷೆ ಇದ್ದಾಗಲೂ ಪ್ರಶ್ನೆಗಳನ್ನು ಓದಿಕೊಳ್ಳಲು 15 ನಿಮಿಷವನ್ನು ಹೆಚ್ಚುವರಿಯಾಗಿ ಕೊಡಲಾಗುತ್ತಿತ್ತು ಎಂಬುದು ಗಮನಾರ್ಹ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top