ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನ ಕೇಮ್ಮಾಯಿಯಲ್ಲಿ ನರೇಂದ್ರ ಮೋದಿಯವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ದೇವರಿಗೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು
ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸೇವೆ ಮಾಡಲಾಯಿತು.
ಈ ಸಂದರ್ಭದಲ್ಲಿ ಚಿಕ್ಕಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕಾರ್ತಿಕ್ ಗೌಡ ಅಂದ್ರಟ್ಟ, ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮುಖ್ಯಸ್ಥ ಶ್ರೀಧರ ಬೈಪಾಡಿತ್ತಾಯ, ಪ್ರಕಾಶ್ ಪಂಜಿಗ, ಯೋಗೀಶ್ ಮೆರ್ಲ, ಪದ್ಮಚಂದ್ರ ಕೊಳ್ಯ, ರಾಜು ಶೆಟ್ಟಿ, ಸಾಯಿ ಲಕ್ಷ್ಮಿ, ದೀಕ್ಷಿತ್ ಬೀರಿಗ, ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.