ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ

ಕಣಿವೆ ರಾಜ್ಯದಲ್ಲಿ ಹತ್ತು ವರ್ಷದ ಬಳಿಕ ವಿಧಾನಸಭೆ ಚುನಾವಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹತ್ತು ವರ್ಷಗಳ ಬಳಿಕ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 2014ರ ಬಳಿಕ ಮೊದಲ ಅಸೆಂಬ್ಲಿ ಚುನಾವಣೆ ನಡೆಯುತ್ತಿದೆ. 2019ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ತೆಗೆದುಹಾಕಿದ ನಂತರ ರಾಜ್ಯದಲ್ಲಿ ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
ಅಂತೆಯೇ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ವಿಧಾನಸಭೆ ಚುನಾವಣೆ ಎದುರಿಸುತ್ತಿರುವುದು ಕೂಡ ಇದೇ ಮೊದಲು. 370ನೇ ವಿಧಿಯನ್ನು ರದ್ದುಗೊಳಿಸಿದಾಗ,ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿತ್ತು.
ಮೋದಿ, ಅಮಿತ್‌ ಶಾ ನೇತೃತ್ವದ ಬಿಜೆಪಿ, ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ, ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಇತರ ಪಕ್ಷಗಳು ಅಬ್ದುಲ್ ಘನಿ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್, ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮತ್ತು ಅಲ್ತಾಫ್ ಬುಖಾರಿಯವರ ಅಪ್ನಿ ಪಾರ್ಟಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ಕೆಲವು ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವ ನಿಷೇಧಿತ ಜಮಾತೆ ಇಸ್ಲಾಮಿ ಚುನಾವಣೆಗೆ ಎಂಟ್ರಿ ಕೊಟ್ಟಿರುವುದು ಕುತೂಹಲಕಾರಿ ಬೆಳವಣಿಗೆಯಾಗಿದೆ.

ಪುಲ್ವಾಮಾದಲ್ಲಿ ನಾಲ್ಕು, ಶೋಪಿಯಾನ್‌ನಲ್ಲಿ ಎರಡು, ಕುಲ್ಗಾಮ್‌ನಲ್ಲಿ ಮೂರು, ಅನಂತನಾಗ್‌ನಲ್ಲಿ ಏಳು, ಕಿಶ್ತ್‌ವಾರ್‌ನಲ್ಲಿ ಮೂರು, ದೋಡಾದಲ್ಲಿ ಮೂರು ಮತ್ತು ರಾಂಬನ್ ಮತ್ತು ಬನಿಹಾಲ್‌ನಲ್ಲಿ ತಲಾ ಎರಡು ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಎಂಟು ಕ್ಷೇತ್ರಗಳು ಜಮ್ಮು ಮತ್ತು 16 ಕ್ಷೇತ್ರಗಳು ಕಾಶ್ಮೀರ ಕಣಿವೆಯಲ್ಲಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ಘಟನೆಗಳು ಹೆಚ್ಚುತ್ತಿವೆ. ಕಳೆದ ವಾರ ಮೂರು ಎನ್‌ಕೌಂಟರ್‌ಗಳು ನಡೆದಿದ್ದು, ಇದರಲ್ಲಿ ಕಿರಿಯ ಕಮಿಷನ್ಡ್ ಅಧಿಕಾರಿ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದರು. ಕನಿಷ್ಠ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಅಭೂತಪೂರ್ವ ಎನ್ನುವಂತಃ ಭದರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜನರು ನಿರ್ಭೀತಿಯಿಂದ ಬಂದು ಮತ ಚಲಾವಣೆ ಮಾಡಬೇಕೆಂದು ಚುನಾವಣಾ ಆಯೋಗ ಮನವಿ ಮಾಡಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top