ಪುತ್ತೂರು: ನಮ್ಮ ಕನ್ನಡದ ನೆ ವಿಜ್ಞಾನ ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಆಗಾಧ ಪರಿಶ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಯೋಜನೆಗಳಿವೆ. ಇವರ ಕಾರ್ಯತತ್ಪರತೆಯು ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್
ಪುತ್ತೂರು: ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್ ಹೇಳಿದರು
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು.
ಯಾವುದೇ ಕೆಲಸ ಮಾಡುವಾಗ ತಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡಬೇಕು, ದಿನದಿಂದ ದಿನಕ್ಕೆ ಬದಲಾಗುವ ತಂತ್ರಜ್ಞಾನವನ್ನು ಇಂಜಿನಿಯರುಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಂಡು ಸಮಾಜದ ಉನ್ನತಿಗೆ ಮತ್ತು ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ, ವಿಶ್ವೇಶವರಯ್ಯನವರಿಗೆ ಹೋಲಿಸುವ ಇನ್ನೊಬ್ಬ ವ್ಯಕ್ತಿ ನಮಗೆ ಸಿಗಲಾರರು. ಲಂಚಕೋರತನ, ಲಾಭಕೋರತನದ ಸವಾಲನ್ನು ಎದುರಿಸುತ್ತಿರುವ ಸಮಾಜದಲ್ಲಿ ಸರ್.ಎಂ.ವಿ ಯವರ ನಿಸ್ವಾರ್ಥ ದುಡಿಮೆ ನಮಗೆ ದಾರಿದೀಪವಾಗಬಲ್ಲದು ಎಂದರು
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ನಿರ್ದೇಶಕ ಸತ್ಯನಾರಾಯಣ ಭಟ್ ಮಾತನಾಡಿ, ಅದಮ್ಯ ಚೇತನ, ಕ್ರಮನಿಷ್ಟವಾದ ಜೀವನ ಶೈಲಿ, ದೇಶಕ್ಕಾಗಿ ಕೆಲಸ ಮಾಡುವ ತುಡಿತ ಇವುಗಳಿಂದಾಗಿ ಸರ್.ಎಂ.ವಿಶ್ವೇಶ್ವರಯ್ಯನವರು ದೇಶದ ಇತಿಹಾಸದಲ್ಲಿ ಹೊಸ ಆಯಾಮವನ್ನೇ ಹುಟ್ಟುಹಾಕಿದರು ಎಂದು ಹೇಳಿದರು. ಉತ್ತಮವಾದ ಕಾರ್ಯಯೋಜನೆಯನ್ನು ತಯಾರಿಸಿ ಅದನ್ನು ಸರಿಯಾಗಿ ಅನುಷ್ಠಾನಗೊಳಿಸುವವನು ಮಾತ್ರ ಶ್ರೇಷ್ಟ ಇಂಜಿನಿಯರ್ ಆಗಬಲ್ಲ ಎಂದರು.
ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ ಸ್ವಾಗತಿಸಿದರು. ಆಶುತೋಶ್ ಪಸೋಡಿ ವಿಶ್ವೇಶ್ವರಯ್ಯನವರ ಸಾಧನೆಯ ಬಗ್ಗೆ ಮಾಹಿತಿ ನೀಡಿದರು, ಶ್ರೀರಕ್ಷಾ ಅತಿಥಿಗಳನ್ನು ಪರಿಚಯಿಸಿದರು. ಪವನ್‌ರಾಜ್ ವಂದಿಸಿ, ದಿಶಾ ಕಾರ್ಯಕ್ರಮ ನಿರ್ವಹಿಸಿದರು.