ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

ಅತ್ಯಾಚಾರ, ಬ್ಲ್ಯಾಕ್‌ಮೇಲ್‌ ಪ್ರಕರಣದಲ್ಲಿ ಬಂಧಿಸಿದ ಪೊಲೀಸರು

ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​.ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು.



































 
 

ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top