ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವ ಆರೋಪ ಕೇಳಿ ಬಂದ ಬೆನ್ನಲ್ಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿದೆ. ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಮುಜರಾಯಿ ದೇವಾಲಯಗಳಲ್ಲಿ ಬಳಸುವಂತೆ ಸೂಚನೆ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.
ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ.