ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಸರಿ ಇದೆ ಎಂದ ಹೈಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಪೀಠ ಮಂಗಳವಾರ ಪ್ರಕಟಿಸಿದೆ.
ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಿಎಂ ವಿರುದ್ಧ ಖಾಸಗಿ ದೂರುದಾರರುಅನುಮತಿ ಕೋರಬಹುದು. ಸಂವಿಧಾನದ ವಿಧಿ 17ಎ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸ್ಸರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. 17ಎ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದೆ.
ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.
ಸಿದ್ದರಾಮಯ್ಯ ಎದುರು ಈ ತೀರ್ಪು ಪ್ರಶ್ನಿಸಿ ಸುಪ್ರಂ ಕೋರ್ಟಿಗೆ ಹೋಗುವ ಆಯ್ಕೆ ಇದ್ದರೂ ಸದ್ಯಕ್ಕಂತೂ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.