ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್ ಬಳಿಕ ಕಮಲಾ ಹ್ಯಾರಿಸ್ ಗುರಿ
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರ ಕಚೇರಿ ಮೇಲೆ ಗುಂಡಿನ ದಾಳಿ ನಡೆದಿದೆ. ಅಮೆರಿಕದ ಅರಿಜೋನಾದಲ್ಲಿರುವ ಕಮಲಾ ಹ್ಯಾರಿಸ್ ಕಚೇರಿ ಮೇಲೆ ದುಷ್ಕರ್ಮಿಗಳು ನಿನ್ನೆ ಮಧ್ಯರಾತ್ರಿ ವೇಳೆ ಗುಂಡಿನ ದಾಳಿ ನಡೆಸಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ಬಿರುಸಿನ ಪ್ರಚಾರ ನಡೆಸುತ್ತಿರುವಾಗಲೇ ಈ ಘಟನೆ ನಡೆದಿದೆ.
ಈ ಮೊದಲು ಅವರ ಪ್ರತಿಷ್ಪರ್ಧಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರನ್ನು ಸಾಯಿಸಲು ಎರಡು ಸಲ ಪ್ರಯತ್ನಿಸಲಾಗಿತ್ತು. ಎರಡು ಸಲವೂ ಟ್ರಂಪ್ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಇದೀಗ ಅವರ ಪ್ರತಿಸ್ಪರ್ಧಿ ಕಮಲಾ ಹ್ಯಾರಿಸ್ ಮೇಲೆ ಗುಂಡಿನ ದಾಳಿಯಾಗಿದೆ.
ಕಮಲಾ ಹ್ಯಾರಿಸ್‌ಗೆ ಹಲವು ರಾಜ್ಯಗಳಲ್ಲಿ ವ್ಯಾಪಕ ಬೆಂಬಲ ಸಿಗುತ್ತಿದ್ದು, ಟ್ರಂಪ್‌ಗೆ ಅವರು ಬಲವಾದ ಸ್ಪರ್ಧೆ ನೀಡುತ್ತಿದ್ದಾರೆ. ಚರ್ಚೆಗಳಲ್ಲೂ ಕಮಲಾ ಹ್ಯಾರಿಸ್, ಟ್ರಂಪ್ ಅವರನ್ನು ಹಿಂದಿಕ್ಕಿದ್ದಾರೆ. ಇದನ್ನು ಸಹಿಸಲಾಗದ ಯಾರೋ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಕಮಲಾ ಅವರು ಪೆನ್ಸಿಲ್ವೇನಿಯಾ, ವಿಸ್ಕಾನ್ಸಿನ್ ಮತ್ತು ಮಿಚಿಗನ್ ರಾಜ್ಯಗಳಲ್ಲಿ ಶೇ.4 ಪಾಯಿಂಟ್‌ಗಳ ಮುನ್ನಡೆ ಸಾಧಿಸಿದ್ದಾರೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಎರಡನೇ ಬಾರಿಗೆ ಹತ್ಯೆ ಯತ್ನ ನಡೆದು ಒಂದು ವಾರದ ಬಳಿಕ ಈ ಘಟನೆ ಸಂಭವಿಸಿದೆ.
ಅರಿಜೋನಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿ ಮೇಲೆ ಗುಂಡು ಹಾರಿಸಲಾಯಿತು. ರಾತ್ರಿಯ ಸಮಯದಲ್ಲಿ ಕಚೇರಿಯೊಳಗೆ ಯಾರೂ ಇರಲಿಲ್ಲ.