ಮಂಗಳೂರು: ಮಂಗಳೂರಿನ ಕಂಕನಾಡಿಯ ಬೆಂದೂರ್ವೆಲ್ನಲ್ಲಿ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮೊಹ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ.
ಮೊಹ್ಮದ್ ಮಾಝಿನ್ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ಪರೆಂಟ್ ಕ್ಲಿನಿಕ್ಗೆ ಹೋಗಿದ್ದರು. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಹೆಚ್ಚು ಸಮಯ ಕಳೆದರೂ ಶಸ್ತ್ರಚಿಕಿತ್ಸೆ ಮುಗಿಯದ ಕಾರಣ ಸಂಶಯಗೊಂಡ ಪೋಷಕರು ಈ ಬಗ್ಗೆ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೇ ಮಾಝೀನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿದ ಎಡವಟ್ಟಿನಿಂದ ಮಾಝಿನ್ ಸಾವಿಗೀಡಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದದಾರೆ. ಈ ಕುರಿತು ಕದ್ರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.